ಮೈಸೂರು: ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಗೆ ರೈತ ರಾಜಶೇಖರ್ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮುಂದೆ ರೈತರು ಸಚಿವ ಈಶ್ವರ್ ಖಂಡ್ರೆ ಘೇರಾವ್ ಹಾಕಿದ ಘಟನೆ ಜರುಗಿತು.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹಸುಗಳನ್ನು ಮೇಯಿಸುವ ವೇಳೆ ಹುಲಿ ದಾಳಿಗೆ ಸಿಲುಕಿ ರೈತ ರಾಜಶೇಖರ್ ಸಾವನ್ನಪ್ಪಿದ್ದರು. ವಿಷಯ ಗೊತ್ತಿದ್ದರೂ ತಾಲ್ಲೂಕಿನಲ್ಲೇ ಇದ್ದ ಸಚಿವ ಈಶ್ವರ್ ಖಂಡ್ರೆ ಅವರು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟಿರಲಿಲ್ಲ. ಪರಿಣಾಮ ರೊಚ್ಚಿಗೆದ್ದ ಗ್ರಾಮಸ್ಥರು ಈಶ್ವರ್ ಖಂಡ್ರೆ ಸ್ಥಳಕ್ಕೆ ಬರುವಂತೆ ಪ್ರತಿಭಟನೆ ನಡೆಸಿದ್ದರು.
ಇಂದು ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮೃತ ರೈತನ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ವೇಳೆ ಶವಾಗಾರದ ಬಳಿ ಆಗಮಿಸಿದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದರು.
ಇದನ್ನು ಓದಿ: ಹುಲಿ ದಾಳಿ | ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ : ಸಿ.ಎಂ
ರೈತನ ಸಾವಿಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಆ ಭಾಗದಲ್ಲಿ ಪ್ರಾಣಿ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಮಾಡಬೇಕು. ಘಟನೆಗೆ ಕಾರಣೀಕರ್ತರಾದವರನ್ನು ತಕ್ಷಣ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ರೈತನ ಮೃತದೇಹವನ್ನು ಮೈಸೂರಿಗೆ ತಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ನಿನ್ನೆ ಸರಗೂರಿನಲ್ಲಿ ಇದ್ದರೂ ಸಚಿವರು ಘಟನಾ ಸ್ಥಳಕ್ಕೆ ಬರಲಿಲ್ಲ. ಇವತ್ತು ಘಟನಾ ಸ್ಥಳದಲ್ಲಿ ಗಲಾಟೆ ಆಗುತ್ತೆ ಎಂದು ಎಲ್ಲರಿಗೂ ಗೊತ್ತಿತ್ತು. ಅದಕ್ಕೆ ಮೈಸೂರಿಗೆ ಮೃತದೇಹವನ್ನು ತಂದಿದ್ದೀರಿ ಎಂದು ಸಚಿವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಗಲಾಟೆ ಹೆಚ್ಚಾಗುತ್ತಿದ್ದಂತೆ ಯಾವುದೇ ಸ್ಪಷ್ಟ ನಿಲುವು ತಾಳದ ಸಚಿವ ಈಶ್ವರ್ ಖಂಡ್ರೆ ಅವರು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ. ಹೆಚ್ಚಿನ ಪರಿಹಾರಕ್ಕೂ ಪ್ರಯತ್ನಿಸುತ್ತೇವೆ. ಯಾರೇ ಅಕ್ರಮ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿ ಸ್ಥಳದಿಂದ ತೆರಳಿದರು.
ಈ ವೇಳೆ ನಮ್ಮ ಪ್ರಶ್ನೆಗಳಿಗೆ ಸಚಿವ ಈಶ್ವರ್ ಖಂಡ್ರೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆರೋಪಿಸಿದ ರೈತರು, ಶವಾಗಾರದ ಮುಂದೆ ಧರಣಿ ನಡೆಸಿದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…