ಮೈಸೂರು ನಗರ

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ, ಪ್ರತಿ ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಪಂಚೇಂದ್ರೀಯಗಳೇ ಇಲ್ಲದ ದಪ್ಪ ಚರ್ಮದ ಈ ಸರ್ಕಾರಗಳಿಗೆ ರೈತರ ಕಷ್ಟ ಅರ್ಥವಾಗುತ್ತಿಲ್ಲ, ವಿಶ್ವಕ್ಕೆ ಅನ್ನ ಕೊಡುವ ರೈತನ ದಿನಾಚರಣೆಯನ್ನು ಸರ್ಕಾರಗಳು ರಾಷ್ಟ್ರೀಯ ಹಬ್ಬವನ್ನಾಗಿ ಆಚರಣೆ ಮಾಡಬೇಕು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಗುಡುಗಿದರು.

ಮೈಸೂರು ಮೆಡಿಕಲ್ ಕಾಲೇಜು ಅಮೃತೋತ್ಸವ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾ ಒಕ್ಕೂಟದಿಂದ ಏರ್ಪಡಿಸಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಗಳ ರೈತ ವಿರೋಧಿ ನೀತಿಗಳಿಂದ ಮುಂದಿನ ತಲೆ ಮಾರಿಗೆ ರೈತವರ್ಗವನ್ನು ಹುಡುಕುವಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿಗೆ ಸಾಕಷ್ಟು ಅನುದಾನ ಕೊಡುತ್ತೇವೆ, ಆದರೇ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಲು ಆಗಲ್ಲ ಎನ್ನುವ ರಾಜಕಾರಣಿಗಳು, ಇದುವರೆಗೂ ಕೃಷಿಗೆ ಯಾವುದೇ ಅನುದಾನ ಕೊಟ್ಟಿಲ್ಲ. ಕೊರೊನಾ ಸಂದರ್ಭದಲ್ಲಿ ಎಲ್ಲಾ ಕಡೆ ಬಾಗಿಲು ಹಾಕಿದರೂ ರೈತರು ಬಾಗಿಲು ಹಾಕದೇ ಕೆಲಸ ಮಾಡಿದ್ದಾರೆ. ಚುನಾವಣಾ ಪೂರ್ವ ಮಾತು ಕೊಟ್ಟು ತಪ್ಪಿದ ಕಾರಣಕ್ಕೆ ರೈತರ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳು ಬರಲು ಆಗುತ್ತಿಲ್ಲ.

೫ ವರ್ಷಕ್ಕೊಮ್ಮೆ ಜನರ ಸೇವಕನಾಗಿರುತ್ತೇನೆಂದು ಬರುವ ರಾಜಕಾರಣಿಗಳು ಗೆದ್ದ ನಂತರ ತಮ್ಮ ಆದಾಯ ದುಪ್ಪಟ್ಟು ಮಾಡಿಕೊಂಡಿರುತ್ತಾರೆ. ಜತೆಗೆ ರೈತ ಮುಖಂಡರ ಮುಖವಾಡ ಹಾಕಿಕೊಂಡ ಕೆಲವರು ಯುವ ಪೀಳಿಗೆಯನ್ನು ಟೀಕಿಸುತ್ತಿದ್ದಾರೆ. ದಪ್ಪ ಚರ್ಮದ ಸರ್ಕಾರಗಳಿಂದಾಗಿ ರೈತರು ನಿರಂತರವಾಗಿ ಹೋರಾಟ ಮಾಡಬೇಕಿದೆ. ನಮ್ಮ ಬೆಳೆಗೆ ಬೆಲೆ ತೆಗೆದುಕೊಳ್ಳಲು ನಾವು ಹೋರಾಟ ಮಾಡಬೇಕಾದ ಸ್ಥಿತಿಯಿದೆ. ಕೃಷಿ ಪರಿಷತ್ ರಚನೆ ಆಗಬೇಕು. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಬೇಕು. ರೈತರಿಗೆ ಮೀಸಲಾತಿ ಕೊಡಬೇಕು ಎಂದು ಭಾಗ್ಯರಾಜ್ ಹೇಳಿದರು.

ಇದನ್ನೂ ಓದಿ:-ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಮಠದ ಪೀಠಾಧಿಪತಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅವರು ಮಾತನಾಡಿ, ಎಲ್ಲರಿಗೂ ಎಲ್ಲ ಭಾಗ್ಯಗಳನ್ನು ನೀಡಿದ ಈ ಸರ್ಕಾರ ರೈತರಿಗೆ ಯಾವುದೇ ಭಾಗ್ಯ ನೀಡಿಲ್ಲ, ವರ್ಷಪೂರ್ತಿ ಕಷ್ಟಪಟ್ಟು ಬೆಳೆ ಬೆಳೆದು ಮಾರಾಟಕ್ಕೆ ಹೋದಾಗ ಆತನಿಗೆ ಬೆಲೆ ಸಿಗುವುದಿಲ್ಲ, ಇಂತಹ ಸಂದರ್ಭದಲ್ಲಾದರೂ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆದು ರೈತರ ಸಂಕಷ್ಟಕ್ಕೆ ನೆರವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅರಮನೆ ಮೈದಾನದಿಂದ ಸಾವಿರಾರು ರೈತರು, ರೈತ ಮಹಿಳೆಯರು ಮೆರವಣಿಗೆ ಮೂಲಕ ಆಗಮಿಸಿದರು. ವೀರಗಾಸೆ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಅರಮನೆ ಎದುರು ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಲಂಕೃತ ಎತ್ತಿನಗಾಡಿ ಮೆರವಣಿಗೆಗೆ ಕರ್ನಾಟಕ ರಾಜ್ಯ ರೈತಸಂಘ (ರೈತಬಣ)ದ ರಾಜ್ಯಾಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಎತ್ತಿನಗಾಡಿಗೆ ಪೂಜೆ ಸಲ್ಲಿಸಿದ ಬಳಿಕ ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಮಠದ ಪೀಠಾಧಿಪತಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅವರು ಮೆರವಣಿಗೆಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಸಂಸದ ಯದುವೀರ್‌ ಒಡೆಯರ್‌ ಗೈರು :
ಕಾರ್ಯಕ್ರಮ ಮೆರವಣಿಗೆಗೆ ಚಾಲನೆ ನೀಡಬೇಕಿದ್ದ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಗೈರಾಗಿದ್ದರು. ಮಹಾ ಒಕ್ಕೂಟದ ಪದಾಧಿಕಾರಿಗಳಾದ ಬೀರಪ್ಪ ದೇಶನೂರು, ಬಸನಗೌಡ ಪಾಟೀಲ, ನಾಸೀರ್ ಭಗವಾನ್, ಪಿ.ಎಂ.ರವಿಕುಮಾರ್, ದಾದಾ ಮೆಹಬೂಬ ಸಾಬ ನವಲಗುಂದ, ಸುರೇಶ್ ಮೂಲಿಮನಿ, ಮಹಾದೇವಿ ಹೂವಿನಗೋಳ, ಈರಣ್ಣ ಅಂಗಡಿ, ಗಣೇಶ್ ಇಳಿಗೆರೆ, ಹೇಮಾ ಕಾಜಗಾರ, ಕೆಆರ್‌ಎಸ್ ರಾಮೇಗೌಡ, ಮಂಡ್ಯ ಜಿಲ್ಲೆಯ ಹೆಸರಾಂತ ಪೈಲ್ವಾನ್ ಮುಕುಂದ, ದೇವರಾಜು, ಶೌಕತ್, ಬೆಂಗಳೂರು ಕೃಷ್ಣ, ಹನುಮಂತಪ್ಪ, ಕಮಲ್, ಶಿವಮೂರ್ತಿ, ರಘುನಾಥ್, ಮಲ್ಲಿಕಾರ್ಜುನ, ಬಿ.ಅಶೋಕ್ ದಾಸೇಗೌಡ, ಮಾಜಿ ಸೈನಿಕರಾದ ದಿವಾಕರ ಕೆ.ಪಿ., ಬಸವರಾಜು, ರವಿಕುಮಾರ್, ಡಿ.ಹೆಚ್.ನವಲಗುಂದ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

3 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

3 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

4 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

5 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

5 hours ago

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

5 hours ago