ಮೈಸೂರು: ಪಂಜಾಬ್ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ನಗರದ ನ್ಯಾಯಾಲಯದ ಬಳಿಯಲ್ಲಿ ಇರುವ ಗಾಂಧೀಜಿ ಪ್ರತಿಮೆ ಬಳಿ ಭಾನುವಾರ ರಾತ್ರಿ ರೈತರ ಪ್ರತಿಭಟನೆ ನಡೆಸಿದರು.
ಮೇಣದ ದೀಪ ಹಿಡಿದು ಕೇಂದ್ರದ ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಂಜಾಬಿನ ಕನೋರಿ ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ಎಂಎಸ್‌ಪಿ ಕಾಯ್ದೆ ಗ್ಯಾರಂಟಿ ಕಾನೂನು ಜಾರಿ, ದೇಶದ ರೈತರ ಸಂಪೂರ್ಣ ಸಾಲ ಮನ್ನಾ, 60 ವರ್ಷ ತುಂಬಿದ ರೈತರಿಗೆ ಪೆನ್ಸನ್ ಇತ್ಯಾದಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಚಳುವಳಿ ನಡೆಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಹಾಗೂ ಮತ್ತಿತರ ನೂರಾರು ರೈತ ಮುಖಂಡರನ್ನು ಬಂಧಿಸಿ ಚಳುವಳಿಯನ್ನು ವಿಫಲ ಗೊಳಿಸಲು ಯತ್ನಿಸಲಾಗುತ್ತಿದೆ.
ಹೋರಾಟ ಮಾಡುತ್ತಿರುವ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಬಂಧಿಸಿರುವ ರೈತರು ಹಾಗೂ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.





