Mysore
21
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

ಮೈಸೂರು| ನಾಲೆಗಳಿಗೆ ನೀರು ಬಿಡುವಂತೆ ಆಗ್ರಹ: ಅನ್ನದಾತರಿಂದ ಕಾಡಾ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ ಪ್ರತಿಭಟನೆಗೆ ಕ್ಯಾರೆ ಎನ್ನದ ಕುಳಿತಿದ್ದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ರೈತರೆಲ್ಲಾ ಸೇರಿ ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಕಚೇರಿ ಒಳಗೆ ಹೋಗಲು ಬಿಡದ ಹಿನ್ನೆಲೆಯಲ್ಲಿ ಹೊರ ಭಾಗದಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದ ರೈತರು, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಲ್ಲಿ ಅಂತರ್ಜಲ ಕುಸಿಯುತ್ತಿದೆ. ಬೆಳೆಗಳು ಒಣಗುತ್ತಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಹಲವಾರು ರೈತರು ಭಾಗಿಯಾಗಿದ್ದರು.

Tags:
error: Content is protected !!