ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಳಿಕ ಪ್ರತಿಭಟನೆಗೆ ಕ್ಯಾರೆ ಎನ್ನದ ಕುಳಿತಿದ್ದ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ರೈತರೆಲ್ಲಾ ಸೇರಿ ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಕಚೇರಿ ಒಳಗೆ ಹೋಗಲು ಬಿಡದ ಹಿನ್ನೆಲೆಯಲ್ಲಿ ಹೊರ ಭಾಗದಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದ ರೈತರು, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಲ್ಲಿ ಅಂತರ್ಜಲ ಕುಸಿಯುತ್ತಿದೆ. ಬೆಳೆಗಳು ಒಣಗುತ್ತಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಹಲವಾರು ರೈತರು ಭಾಗಿಯಾಗಿದ್ದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…