Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದು ಬಂದ್

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ.

ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ ಸಾರ್ವಜನಿಕರು ಪ್ರತಿದಿನ ಆಹಾರ ಹಾಕುವುದರಿಂದ ಪಾರಂಪರಿಕ ಕಟ್ಟಡಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಕೆಲವು ಸಂಘಟನೆಗಳು ಆಹಾರ ಹಾಕುವುದನ್ನು ನಿಲ್ಲಿಸುವಂತೆ ಸಂಸದರಿಗೆ ಒತ್ತಾಯಿಸಿದ್ದು, ಇದಕ್ಕೆ ಪರ-ವಿರೋಧಗಳು ಕೇಳಿ ಬಂದಿದ್ದವು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಂದು (ಸೆ.22) ನಾಗರೀಕರ ಸಭೆ ಸಂಸದ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಸಮ್ಮುಖದಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ಪದ್ಧತಿ ರದ್ಧತಿ ಹಾಗೂ ಕಾಳು ಹಾಕುವುದರಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ʼನಾಗರೀಕರ ಜಾಗೃತ ಸಭೆʼ ನಡೆಯಿತು

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಅವರು, ತಜ್ಞರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಪರ-ವಿರೋಧದ ಚರ್ಚೆಯ ನಂತರ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸುತ್ತೇವೆ ಎಂಬುದಾಗಿ ಖಬೂತರ್‌ ದಾನ್‌ ಜೈನ್‌ ಸಂಘಟನೆ ಹೇಳಿದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ತಜ್ಞರು, ಪರಿಸರವಾದಿಗಳು ಹಾಗೂ ವೈದ್ಯರು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Tags: