ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ.
ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ ಸಾರ್ವಜನಿಕರು ಪ್ರತಿದಿನ ಆಹಾರ ಹಾಕುವುದರಿಂದ ಪಾರಂಪರಿಕ ಕಟ್ಟಡಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ ಕೆಲವು ಸಂಘಟನೆಗಳು ಆಹಾರ ಹಾಕುವುದನ್ನು ನಿಲ್ಲಿಸುವಂತೆ ಸಂಸದರಿಗೆ ಒತ್ತಾಯಿಸಿದ್ದು, ಇದಕ್ಕೆ ಪರ-ವಿರೋಧಗಳು ಕೇಳಿ ಬಂದಿದ್ದವು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಂದು (ಸೆ.22) ನಾಗರೀಕರ ಸಭೆ ಸಂಸದ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಮ್ಮುಖದಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ಪದ್ಧತಿ ರದ್ಧತಿ ಹಾಗೂ ಕಾಳು ಹಾಕುವುದರಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ʼನಾಗರೀಕರ ಜಾಗೃತ ಸಭೆʼ ನಡೆಯಿತು
ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಅವರು, ತಜ್ಞರು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಪರ-ವಿರೋಧದ ಚರ್ಚೆಯ ನಂತರ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸುತ್ತೇವೆ ಎಂಬುದಾಗಿ ಖಬೂತರ್ ದಾನ್ ಜೈನ್ ಸಂಘಟನೆ ಹೇಳಿದೆ. ಕಾರ್ಯಕ್ರಮದಲ್ಲಿ ಸಾಮಾಜಿಕ ತಜ್ಞರು, ಪರಿಸರವಾದಿಗಳು ಹಾಗೂ ವೈದ್ಯರು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…