ಮೈಸೂರು: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಆರ್ಭಟ ಜೋರಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ.
ಫೆಂಗಲ್ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆ ಸುರಿದ ಪರಿಣಾಮ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿಬಿದ್ದಿವೆ.
ರಸ್ತೆಗುರುಳಿದ ಬಂಡೆಗಳಿಂದ ಸಂಚಾರಕ್ಕೆ ಸ್ವಲ್ಪ ಅಡಚಣೆಯಾಗಿತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಮೈಸೂರಿನಲ್ಲಿ ನಿರಂತರ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವೂ ಆಗಿದೆ. ಹಲವು ಕಡೆ ಕಟಾವಿಗೆ ಬಂದಿದ್ದ ಭತ್ತ ನೀರು ಪಾಲಾಗಿದ್ದು, ಭತ್ತದ ಗದ್ದೆಗಳು ಕೆರೆಯಂತಾಗಿವೆ.
ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.