ಮೈಸೂರು ನಗರ

ಗುಣಮಟ್ಟದ ಆಹಾರ ಮಾರಾಟ ಮಾಡದಿದ್ದಲ್ಲಿ ಪ್ರಕರಣ ದಾಖಲಿಸಿ: ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಪಿ

ಮೈಸೂರು: ಸಾರ್ವಜನಿಕರು ಹಣ ನೀಡಿ ಆಹಾರ ಪದಾರ್ಥ ಖರೀದಿಸುತ್ತಾರೆ. ಅವರಿಗೆ ಗುಣಮಟ್ಟದ ಆಹಾರ ಪದಾರ್ಥ ನೀಡಬೇಕಿರುವುದು ಮಾರಾಟಗಾರರ ಕೆಲಸವಾಗಿರುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆಹಾರ ಪದಾರ್ಥ ಮಾರಾಟ ಕಂಡುಬಂದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಿಯಮದಂತೆ ಪ್ರಕರಣ ದಾಖಲಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಶಿವರಾಜು ಪಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006ರ ಅನುಷ್ಠನದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೈಸೂರು ನಗರ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಪರಿಶೀಲಿಸಲು 3 ವೃತ್ತಕ್ಕೆ ಅಧಿಕಾರಿಗಳಿದ್ದು, ಆಹಾರ ಗುಣಮಟ್ಟದ ಪರಿಶೀಲನೆಯ ಸರ್ವೆಗಳು ಅಕ್ಟೋಬರ್‌ 2025 ರಿಂದ ಡಿಸೆಂಬರ್ 2025ರವರೆಗೆ 130 ಆಹಾರ ಪದಾರ್ಥಗಳ ಗುಣಮಟ್ಟದ ಬಗ್ಗೆ ಸರ್ವೆ ನಡೆಸಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದರು‌.

ಬೀದಿ ಬದಿ ಆಹಾರ ಪದಾರ್ಥ ಮಾರಾಟ ಮಾಡುವ ಸ್ಥಳಗಳಲ್ಲಿ ಜನರು ಹೆಚ್ಚು ಆಹಾರ ಸೇವಿಸುತ್ತಾರೆ. ಈ ಸ್ಥಳಗಳಲ್ಲಿ ಮುಂದಿನ ದಿನಗಳಲ್ಲಿ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಆಹಾರ ಸುರಕ್ಷತಾ ಕಚೇರಿಯ ಎಫ್.ಎಸ್.ಎಸ್.ಎ.ಐ ವೆಬ್ ಸೈಟ್ ನಲ್ಲಿ 1.5 ಕೋಟಿ ರೂ ಕ್ಕಿಂತ ಹೆಚ್ಚಿನ ವಹಿವಾಟು ಮಾಡುವ‌ ಆಹಾರ ಮಾರಾಟಗಾರರು ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬೇಕು 1.5 ಕೋಟಿಕ್ಕಿಂತ ಕಡಿಮೆ ವಹಿವಾಟು ಮಾಡುವವರು ನೊಂದಣಿ ಮಾಡಿಕೊಳ್ಳಬೇಕು‌ ಎಂದರು.

ಕುರುಕಲು‌ ತಿಂಡಿ ಸೇರಿದಂತೆ ಹಲವಾರು ಆಹಾರ ಪದಾರ್ಥಗಳನ್ನು ಎರಡು, ಮೂರು ಅಥವಾ ಹೆಚ್ಚು ಬಾರಿ ಕಾಯಿಸಿ ಬಳಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೋಟೆಲ್, ಆಹಾರ ಮಾರಾಟ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದಾಗ ತೀವ್ರ ನಿಗಾ ವಹಿಸಿ, ರಾಸಾಯನಿಕ ಪರೀಕ್ಷೆಗೆ ಒಳಪಡಿಸುವುದರ ಜೊತೆಗೆ ಮಾರಾಟಗಾರರು ಎಣ್ಣೆ ಖರೀದಿಸಿರುವುದು, ಬಳಸಿರುವುದು, ಉಳಿಕೆಯನ್ನು ವಿಲೇವಾರಿ ಮಾಡಿರುವುದನ್ನು ಪರಿಶೀಲಿಸಿ ಎಂದರು.

ಮೈಸೂರು ಮಹಾನಗರ ಪಾಲಿಕೆಯ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತದ ಅಂಕಿತ ಅಧಿಕಾರಿ ಡಾ: ರವೀಂದ್ರ ಎಸ್.ಎಲ್ ಅವರು‌ ಮಾತನಾಡಿ ಇಲಾಖೆಯಿಂದ ಜೆ.ಎಂ‌.ಎಫ್.ಸಿ ನ್ಯಾಯಲಯದಲ್ಲಿ ಒಟ್ಟು 24 ಪ್ರಕರಣಗಳನ್ನು ದಾಖಲಿಸಲಾಗಿದೆ. 6 ಪ್ರಕರಣಗಳು ಇತ್ಯರ್ಥವಾಗಿ 70000 ದಂಡ ವಿಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಗೋಪಿನಾಥ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ‌ ಅಧ್ಯಕ್ಷ ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಹೆಚ್.ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

11 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago