ಮೈಸೂರು ನಗರ

MLC ಮಂಜೇಗೌಡರ ಮೇಲೂ ದೂರು ದಾಖಲಿಸಿ: ಕಾಂಗ್ರೆಸ್‌ ಜಿಲ್ಲಾ ವಕ್ತಾರ ರಾಜೇಶ್‌ ಸವಾಲು

ಮೈಸೂರು: ಎಂಎಲ್‌ಸಿ ಮಂಜೇಗೌಡರೂ ಕೂಡ ಮೂಡಾ (MUDA)ದಲ್ಲಿ ಅಕ್ರಮ ನಿವೇಶನ ಪಡೆದಿದ್ದಾರೆ ಎಂದು ಜಾರಿ ನಿರ್ದೇಶಾನಾಲಯ (ಇಡಿ) ಹೇಳುತ್ತಿದೆ. ತಾಕತ್ತಿದ್ದರೆ ಅವರ ಮೇಲೂ ದೂರು ದಾಖಲಿಸಿ ಎಂದು ಸ್ನೇಹಮಯಿ ಕೃಷ್ಣಗೆ ಕಾಂಗ್ರೆಸ್‌ ಜಿಲ್ಲಾ ವಕ್ತಾರ ರಾಜೇಶ್‌ ಸವಾಲು ಹಾಕಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇರದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಸಿ ಮುಡಾ ಪ್ರಕರಣದಲ್ಲಿ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪರ ಮಾತನಾಡಿದ ಜಿಟಿ ದೇವೆಗೌಡರು ಮೇಲೂ ದೂರು ದಾಖಲಿಸಿ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಇದೆಲ್ಲಾ ಕುಮಾರಸ್ವಾಮಿ ಅವರ ಪಿತೂರಿಯಿಂದ ನಡೆಯುತ್ತಿದೆ ಎಂದು ಹೇಳಿದರು.

ಈಗ ಎಂಎಲ್‌ಸಿ ಮಂಜೇಗೌಡರೂ ಮುಡಾ ಅಕ್ರಮ ನಿವೇಶನದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳುತ್ತಿದೆ. ಸಾಮಾಜಿಕ ಕಳಕಳಿ ಇದ್ದರೆ ಅವರ ಮೇಲೂ ದೂರು ದಾಖಲಿಸಿ. ಅವರ ವಿರುದ್ಧವೂ ಹೋರಾಟ ಮಾಡಿ. ಸಿದ್ದರಾಮಯ್ಯ ಅವರನ್ನೇ ಯಾಕೆ ಟಾರ್ಗೆಟ್‌ ಮಾಡಿ ಕಟ್ಟಿ ಹಾಕುವ ಷಡ್ಯಂತ್ರ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು.

ಎಚ್‌ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿದ ವಿಚಾರಕ್ಕೆ ಕೋರ್ಟ್‌ ಅವರಿಗೆ ಛೀಮಾರಿ ಹಾಕಿದೆ. ನೀವೆ ಅಕ್ರಮದಲ್ಲಿ ಭಾಗಿಯಾಗಿ ಇನ್ನೊಬ್ಬರ ಮೇಲೆ ಯಾವ ನೈತಿಕತೆ ಇಟ್ಟುಕೊಂಡು ಆರೋಪ ಮಾಡುತ್ತೀರಿ? ಎಂದು ಸ್ನೇಹಮಯಿ ಕೃಷ್ಣ ವಿರುದ್ಧ ರಾಜೇಶ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

47 mins ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

1 hour ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

1 hour ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

2 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

5 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

5 hours ago