ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26) ಹತ್ಯೆಯಾದ ವ್ಯಕ್ತಿ. ವಿನೋದ್ ಬಾಮೈದನನ್ನ ಕೊಲೆಗೈದ ಬಾವ.
ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು. ಮನೋಜ್ ಎಣ್ಣೆ ಹೊಡೆದುಕೊಂಡು ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಮನೋಜ್ ಉಪಟಳ ತಾಳಲಾರದೆ, ಟ್ರೂ ಸ್ಪಿರಿಟ್ ಬಾರ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ನಡೆದ ನಂತರ ವಿನೋದ್ ಕೃತ್ಯವೆಸಗಿದ್ದಾನೆ.
ಬಾರ್‌ನಲ್ಲಿ ರೂಮ್ ಬಾಡಿಗೆ ಪಡೆದು ಜೊತೆಯಲ್ಲೆ ಎಣ್ಣೆ ಹೊಡೆದಿದ್ದರು. ಕಂಠಪೂರ್ತಿ ಕುಡಿಸಿ ಪ್ರಜ್ಞೆ ತಪ್ಪಿದ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಹತ್ಯೆ ಬಳಿಕ ಬಾವ ವಿನೋದ್ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಎಫ್‌ಎಸ್ ಎಲ್ ತಂಡದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಮೇಟಗಳ್ಳಿ ಪೊಲೀಸರು ವಿನೋಧ್‌ಗೆ ಬಲೆ ಬೀಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…