ಮೈಸೂರು ನಗರ

ಗುಡ್‌ ನ್ಯೂಸ್‌ ಯೂಟ್ಯೂಬ್ ಚಾನೆಲ್‌ನ ರಾಘವೇಂದ್ರ ವಿರುದ್ಧ ಎಫ್‌ಐಆರ್

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನ.30 ರಂದು ರಾಘವೇಂದ್ರ ಅವರು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವಂತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು | ಪೇದೆಯಿಂದ 35 ಲಕ್ಷ ರೂ. ವಂಚನೆ : ದೂರು

ಎರಡನೇ ಪ್ರಕರಣದಲ್ಲಿ ಓಂ ಸಾಯಿ ಟ್ರಸ್ಟ್‌ನಲ್ಲಿ ಸಹಾಯಕಳಾಗಿ ಕೆಲಸ ನಿರ್ವಹಿಸುತ್ತಿದ್ದ ಜಯಲಕ್ಷಿ ಎಂಬವರು ರಾಘವೇಂದ್ರ ವಿರುದ್ಧ ಜಾತಿ ನಿಂದನೆ ಹಾಗೂ ಅವಾಚ್ಯ ಪದ ಬಳಕೆಯ ಅಡಿಯಲ್ಲಿ ಡಿಸಿಆರ್‌ಇ ಪ್ರಾದೇಶಿಕ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ನ.9 ರಂದು ರಾಘವೇಂದ್ರ ಅವರು ನಮ್ಮ ಸಂಸ್ಥೆಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆಯ ರಾಣಿ ಪ್ರಭ ಅವರು ಕಾಫಿ ನೀಡುವಂತೆ ನನಗೆ ಹೇಳಿದರು. ನಾನು ಕಾಫಿ ಕೊಡಲು ಮುಂದಾದಾಗ ನೀನು ಕೀಳು ಜಾತಿಯವಳು ನನಗೆ ಕಾಫಿ ಕೊಡಲು ಬಂದಿದ್ದೀಯಾ ಎಂದು ನಿಂದಿಸಿದ್ದಲ್ಲದೆ, ನನ್ನನ್ನು ಕೈಗಳಿಂದ ದೂಡಿದರು. ಇಂತಹವರ ಕೈಲಿ ಕಾಫಿ ಕೊಡಿಸುತ್ತೀರಾ ಎಂದು ರಾಣಿ ಪ್ರಭ ಅವರಿಗೆ ನಿಂದಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

29 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

39 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

49 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

3 hours ago