ಮೈಸೂರು ನಗರ

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಅವರ ಫೋಟೋಶೂಟ್‌ಗೆ ಸಂಬಂಧಪಟ್ಟದ್ದಾಗಿದೆ.

ಪಾರಂಪರಿಕ ಕಟ್ಟಡವೊಂದರ ಮುಂದೆ ನಿಯಮ ಮೀರಿ ಫೋಟೋಶೂಟ್‌ ಮಾಡಿಸಿರುವುದು ಈ ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ.

ರಜತ್‌ ಮೈಸೂರಿನ ಹಳೇ ಜಿಲ್ಲಾಧಿಖಾರಿ ಕಚೇರಿ ಕಟ್ಟಡದ ಬಳಿ ಫೋಟೋಶೂಟ್‌ ಮಾಡಿಸಿದ್ದರು. ಈ ವೇಳೆ ಅವರು ಕೈಯಲ್ಲಿ ಸಿಗರೇಟ್‌ ಹಿಡಿದು, ಹೊಗೆ ಬಿಡುತ್ತಾ ಪೋಸ್‌ ನೀಡಿದ್ದರು. ಪಾರಂಪರಿಕ ತಾಣಗಳಲ್ಲಿ ಧೂಮಪಾನ ಮಾಡುವುದು ಹಾಗೂ ಅಂತಹ ಸ್ಥಳಗಳ ಘನತೆಗೆ ಕುಂದು ತರುವಂತೆ ವರ್ತಿಸುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಫೋಟೋಶೂಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ರಜತ್‌ ವಿರುದ್ಧ ದೂರು ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

50 mins ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

2 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

2 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

2 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

2 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

2 hours ago