Mysore
19
mist

Social Media

ಬುಧವಾರ, 18 ಡಿಸೆಂಬರ್ 2024
Light
Dark

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌ ದಾಖಲು: ಕಾರಣ ಇಷ್ಟೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ರೂಪದಲ್ಲಿ ಬಂದಿದ್ದ ಸೀರೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಎಫ್‌ಐಆರ್‌ ದಾಖಲಾಗಿದೆ.

ಸರ್ಕಾರದ ಕೆಲಸಕ್ಕೆ ಅಡ್ಡಿ ಮಾಡಿದರು ಎಂಬ ಆರೋಪ ಹೊರಿಸಿ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಕೃಷ್ಣರಾಜ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್‌ ಮಾಡಿದ್ದಾರೆ.

ಚಾಮುಂಡೇಶ್ವರಿ ದೇವಿಯ ಹರಕೆ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪುಷ್ಟಿ ನೀಡುವಂತೆ ವ್ಯಕ್ತಿಯೊಬ್ಬ ಬೆಟ್ಟದಲ್ಲಿ ಗಂಟೊಂದರಲ್ಲಿ ಸೀರೆಗಳನ್ನು ಕಟ್ಟಿಕೊಂಡು ಕಾರಿಗೆ ಹಾಕುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಇದನ್ನು ಹಲ್ಲೆಗೆಳೆದಿರುವ ಕಾರ್ಯದರ್ಶಿ ರೂಪಾ ಅವರು, ಗಂಟಿನೊಳಗಿದ್ದದ್ದು ಸೀರೆಗಳಲ್ಲ, ದೇವಾಲಯಕ್ಕೆ ಸಂಬಂಧಪಟ್ಟಂತೆ ಕಡತಗಳನ್ನು ಗಂಟು ಹಾಕಿ ಸಾಗಿಸುತ್ತಿರುವುದು ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಆರೋಪ ಮಾಡಿದ ಸ್ನೇಹಮಯಿ ಕೃಷ್ಣಗೆ ಮತ್ತೊಂದು ಆಘಾತ ಎದುರಾಗಿದ್ದು, ಮುಂದಿನ ದಿನಗಲ್ಲಿ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

 

Tags: