ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ರೂಪದಲ್ಲಿ ಬಂದಿದ್ದ ಸೀರೆಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.
ಸರ್ಕಾರದ ಕೆಲಸಕ್ಕೆ ಅಡ್ಡಿ ಮಾಡಿದರು ಎಂಬ ಆರೋಪ ಹೊರಿಸಿ ಚಾಮುಂಡೇಶ್ವರಿ ದೇವಾಲಯದ ಕಾರ್ಯದರ್ಶಿ ರೂಪಾ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ಮಾಡಿದ್ದಾರೆ.
ಚಾಮುಂಡೇಶ್ವರಿ ದೇವಿಯ ಹರಕೆ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪುಷ್ಟಿ ನೀಡುವಂತೆ ವ್ಯಕ್ತಿಯೊಬ್ಬ ಬೆಟ್ಟದಲ್ಲಿ ಗಂಟೊಂದರಲ್ಲಿ ಸೀರೆಗಳನ್ನು ಕಟ್ಟಿಕೊಂಡು ಕಾರಿಗೆ ಹಾಕುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.
ಇದನ್ನು ಹಲ್ಲೆಗೆಳೆದಿರುವ ಕಾರ್ಯದರ್ಶಿ ರೂಪಾ ಅವರು, ಗಂಟಿನೊಳಗಿದ್ದದ್ದು ಸೀರೆಗಳಲ್ಲ, ದೇವಾಲಯಕ್ಕೆ ಸಂಬಂಧಪಟ್ಟಂತೆ ಕಡತಗಳನ್ನು ಗಂಟು ಹಾಕಿ ಸಾಗಿಸುತ್ತಿರುವುದು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಆರೋಪ ಮಾಡಿದ ಸ್ನೇಹಮಯಿ ಕೃಷ್ಣಗೆ ಮತ್ತೊಂದು ಆಘಾತ ಎದುರಾಗಿದ್ದು, ಮುಂದಿನ ದಿನಗಲ್ಲಿ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…