ಮೈಸೂರು: ಅಗ್ನಿ ಅವಘಡ ಸಂಭವಿಸಿದ ಪರಿಣಾಮ ವೃದ್ಧ ಸಜೀವ ದಹನವಾಗಿರುವ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿದ್ದನಾಯ್ಕ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸಿದ್ದನಾಯ್ಕ ಅವರು ಪತ್ನಿ ಲಕ್ಷ್ಮೀಯೊಂದಿಗೆ ವಾಸವಾಗಿದ್ದರು. ಬೆಳಿಗ್ಗೆ ಪತ್ನಿ ಲಕ್ಷ್ಮೀ ಮೊಮ್ಮಗಳ ಜೊತೆ ಹೊರ ಹೋದ ಸಂದರ್ಭದಲ್ಲಿ ಈ ಘಟನೆ ಜರುಗಿದೆ.
ಇದನ್ನು ಓದಿ :ಶ್ರೀರಂಗಪಟ್ಟಣ| ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ
ದಂಪತಿಗಳು ಮನೆಯಲ್ಲಿ ಹಳೆಯ ಪದಾರ್ಥಗಳನ್ನು ಸಂಗ್ರಹಿಸಿ ಇಟ್ಟಿದ್ದರು. ಹೀಗಿರುವಾಗಲೇ ಬೀಡಿ ಸೇದಿ ಎಸೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಮನೆ ತುಂಬ ವ್ಯಾಪಿಸಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಮನೆಯಿಂದ ಹೊರಬರಲು ಸಾಧ್ಯವಾಗದೇ ಸಿದ್ದನಾಯ್ಕ ಸಜೀವ ದಹನವಾಗಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





