ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ.
ಆಸ್ಪತ್ರೆಯ ಚೆಲುವಾಂಬ ವಾರ್ಡ್ ನಲ್ಲಿ ಅಗ್ನಿ ಅವಘಡವಾಗಿದ್ದು, ಆಸ್ಪತ್ರೆ ನವೀಕರಣ ಸಂಬಂಧ ಶೆಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ವೆಲ್ಡಿಂಗ್ ಕಿಡಿ ಹೊತ್ತಿ ಬೆಂಕಿ ಹೊತ್ತಿಕೊಂಡಿದೆ.
ಪರಿಣಾಮ ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿದೆ.
20ಕ್ಕು ಹೆಚ್ಚು ಕೊಠಡಿಯಲ್ಲಿದ್ದ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಬಳಿಕ ಆಗಮಿಸಿದ ಆಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ.





