Mysore
16
clear sky

Social Media

ಗುರುವಾರ, 29 ಜನವರಿ 2026
Light
Dark

ರಾಜ್ಯದ ಐದು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ದ: ಜಿ‌.ಎಸ್.ಸಂಗ್ರೇಶಿ

ಮೈಸೂರು: ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಸಿದ್ಧ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ‌.ಎಸ್. ಸಂಗ್ರೇಶಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಇರುತ್ತದೆ. ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೇವೆ ಎಂದರು.

ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ತಿಳಿಸಿದರು.

Tags:
error: Content is protected !!