ಮೈಸೂರು ನಗರ

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ ರೂ. ಹಣವನ್ನು ವಂಚಿಸಿರುವ ಘಟನೆ ನಡೆದಿದೆ.

ನಗರದ ಕುವೆಂಪುನಗರ ನಿವಾಸಿ ಪ್ರಶಾಂತ ಎಂಬಾತನೇ ದುಷ್ಕರ್ಮಿಗಳಿಂದ ವಂಚನೆಗೆ ಒಳಗಾದವರು. ಅವರು ಪ್ರಶಾಂತ್ ಅವರು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವೇಳೆ ಕೇರಳ ಮೂಲಕ ವಿಶ್ವನಾದನ್ ಹಾಗೂ ಸ್ನೇಹ ಮರಿಯಾ ಎಂಬವರ ಪರಿಚಯವಾಗಿದೆ.

ನಾವು ವಿದ್ಯಾಭ್ಯಾಸ ಮುಗಿಸಿ ಅಮೇರಿಕಾದಲ್ಲಿ ಕೆಲಸದಲ್ಲಿ ಇರುವುದಾಗಿ ಪ್ರಶಾಂತ್‌ಗೆ ಹೇಳಿದ್ದಾರೆ. ನಿನಗೂ ವಿದೆಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿದ್ದಾರೆ. ನಂತರ ಆತನನ್ನು ಬೆಂಗಳೂರು, ಹಾಂಗ್‌ಕಾಂಗ್ ಹಾಗೂ ದುಬೈಗೆ ಕರೆದೊಯ್ದಿದ್ದಾರೆ.

ನಂತರ ನಿನಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅವರು, ಪ್ರಶಾಂತ್ ಮೂಲಕವೇ ಅವರ ಪೋಷಕರನ್ನು ನಂಬಿಸಿ ಹಂತಹಂತವಾಗಿ 1.80 ಕೋಟಿ ರೂ. ಹಣವನ್ನು ಪ್ರಶಾಂತ್ ಖಾತೆಗೆ ಹಾಕಿಸಿಕೊಂಡಿದ್ದಾರೆ.

ನಂತರ ಪ್ರಶಾಂತ್‌ನನ್ನು ಬೆದರಿಸಿ ಅಷ್ಟೂ ಹಣವನ್ನು ಆತನ ಖಾತೆಯಿಂದ ತಮ್ಮ ಖಾತೆಗೆ ವಗಾಯಿಸಿಕೊಂಡಿದ್ದಾರೆ. ನಂತರ ತನ್ನ ಸ್ನೇಹಿತರು ಹಾಗೂ ಸಂಬಂದಿಗಳ ಸಹಾಯದಿಂದ ಪ್ರಶಾಂತ್ ದುಬೈನಿಂದ ವಾಪಸ್ಸಾಗಿದ್ದು, ಇದೀಗ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

6 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

6 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

6 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

6 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

6 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

6 hours ago