BS Yediyurappa
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.
ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮನೆಯ ಪ್ರತಿಯೊಂದು ಶುಭ ಸಮಾರಂಭಕ್ಕೂ ಮುನ್ನ ದೇವರ ದರ್ಶನ ಪಡೆಯುವ ಯಡಿಯೂರಪ್ಪ, ಇಂದು ಚಾಮುಂಡೇಶ್ವರಿ ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.
ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಇದ್ದಕ್ಕಿದ್ದ ಹಾಗೇ ತಾಯಿಯ ದರ್ಶನ ಮಾಡಬೇಕು ಅನ್ನಿಸಿತು.
ಅದಕ್ಕಾಗಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬಂದಿದ್ದೇನೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಮೊಮ್ಮಗನ ಮದುವೆ ಇರುವ ಕಾರಣಕ್ಕೆ ಸಂಕಲ್ಪ ಮಾಡಿದ್ದೇವೆ. ಈ ಸಂದರ್ಭದಲ್ಲಿ ನಾನು ಏನೂ ರಾಜಕೀಯ ಮಾತನಾಡಲ್ಲ ಎಂದರು.
ಇನ್ನು ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಬಹುಭಾಷಾ ನಟ ಕಮಲ ಹಾಸನ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಮಲಾ ಹಾಸನ್ ಹೇಳಿಕೆ ಖಂಡನೀಯ. ಎಲ್ಲರೂ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…