ಮೈಸೂರು ನಗರ

ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್‌ ಕಾರ್ಡ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮನೆಯ ಪ್ರತಿಯೊಂದು ಶುಭ ಸಮಾರಂಭಕ್ಕೂ ಮುನ್ನ ದೇವರ ದರ್ಶನ ಪಡೆಯುವ ಯಡಿಯೂರಪ್ಪ, ಇಂದು ಚಾಮುಂಡೇಶ್ವರಿ ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಇದ್ದಕ್ಕಿದ್ದ ಹಾಗೇ ತಾಯಿಯ ದರ್ಶನ ಮಾಡಬೇಕು ಅನ್ನಿಸಿತು.
ಅದಕ್ಕಾಗಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬಂದಿದ್ದೇನೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಮೊಮ್ಮಗನ ಮದುವೆ ಇರುವ ಕಾರಣಕ್ಕೆ ಸಂಕಲ್ಪ ಮಾಡಿದ್ದೇವೆ. ಈ ಸಂದರ್ಭದಲ್ಲಿ ನಾನು ಏನೂ ರಾಜಕೀಯ ಮಾತನಾಡಲ್ಲ ಎಂದರು.

ಇನ್ನು ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಬಹುಭಾಷಾ ನಟ ಕಮಲ ಹಾಸನ್ ಹೇಳಿಕೆ ವಿಚಾರ‌ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಮಲಾ ಹಾಸನ್ ಹೇಳಿಕೆ ಖಂಡನೀಯ. ಎಲ್ಲರೂ ಕಮಲ್‌ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದರು.

ಆಂದೋಲನ ಡೆಸ್ಕ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

45 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago