Mysore
23
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ವೆಂಕಟೇಶ್ ಪ್ರಸಾದ್ ಅವರು, ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಇದನ್ನು ಓದಿ: ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ದರ್ಶನ ಮುಗಿಸಿ ಬಂದ ಬಳಿಕ ವೆಂಕಟೇಶ್‌ ಪ್ರಸಾದ್‌ರನ್ನು ಕಂಡು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ವೆಂಕಟೇಶ್ ಪ್ರಸಾದ್ ಚಾಮುಂಡಿಬೆಟ್ಟಕ್ಕೆ ತೆರಳುವ ಮುನ್ನ ದಕ್ಷಿಣ ಕಾಶಿ ನಂಜನಗೂಡಿಗೆ ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದರು.

Tags:
error: Content is protected !!