Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್‌ ಜನಾಂದೋಲನ: ಮಾಜಿ ಸಚಿವ ಶ್ರೀರಾಮುಲು

ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. ದಲಿತರ ಹಣಕ್ಕೆ ಖನ್ನ ಹಾಕಿದೆ. ದಲಿತರ ಪರ ಎಂದು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಾವಿರಾರು ಕೋಟಿ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ 35 ಸಾವಿರ ಕೋಟಿ ಹಣ ಬರಬೇಕು. ಈ ಸರ್ಕಾರ ಬಂದ ನಂತರ ಈ ಸಮುದಾಯಕ್ಕೆ ಬರಬೇಕಾದ ಹಣ ಎಲ್ಲಿಗೋ ಹೋಗುತ್ತಿದೆ.?ಚುನಾವಣೆ ಗೆಲ್ಲುವ ಮುನ್ನ ರಾಜಕಾರಣ ಭಾಷಣ ಮಾಡಿದ್ರು. ಗೆದ್ದ ನಂತರ ಸರ್ಕಾರ ದಲಿತರನ್ನು ಮರೆತಿದೆ. 2023ರ ಸಾಲಿನಲ್ಲಿ 11 ಸಾವಿರ ಕೋಟಿ ದಲಿತರ ಹಣವನ್ನು ಬೇರೆ ಕಾರ್ಯಕ್ರಮಕ್ಕೆ ಬಳಸಿಕೊಂಡಿದ್ದಾರೆ. ರಾಜಕಾರಣಕ್ಕೆ ಹಣ ಬಳಕೆ ಆಗ್ತಿದೆ. ದಲಿತರಿಗೆ ಸಿಗಬೇಕಾಗಿದ್ದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಗರಂ ಆದರು.

ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಕೊಡಲು ಕೂಡ ಸಾಧ್ಯವಾಗ್ತಿಲ್ಲ. ನಿಗಮಗಳ ಮೂಲಕ ಜನರಿಗೆ ಸವಲತ್ತುಗಳನ್ನ ನೀಡಲು ಆಗುತ್ತಿಲ್ಲ. ಹೀಗಾಗಿ ಈ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

 

Tags:
error: Content is protected !!