prathap simha
ಮೈಸೂರು: ಡಿಗ್ರಿ, ಮಾಸ್ಟರ್ ಡಿಗ್ರಿ ಹಾಗೂ ಓದುವ ಹವ್ಯಾಸ ಇದ್ದರೆ ಮಾತ್ರ ಜ್ಞಾನ ಬರುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆಪರೇಷನ್ ಸಿಂಧೂರ್ ವೇಳೆ ನಮ್ಮ ವಿಮಾನ ಎಷ್ಟು ನಾಶವಾಗಿವೆ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು, 56 ದೇಶಗಳ ಪೈಕಿ ಎಷ್ಟು ದೇಶಗಳು ಭಾರತಕ್ಕೆ ಬೆಂಬಲ ನೀಡಿವೆ ಎಂದು ಕಾಂಗ್ರೆಸ್‌ನವರಿಗೆ ಗೊತ್ತಾ ಎಂದು ಪ್ರಶ್ನಿಸಿದ ಅವರು, ಡಿಗ್ರಿ, ಮಾಸ್ಟರ್‌ಡಿಗ್ರಿ, ಓದುವ ಹವ್ಯಾಸ ಇದ್ರೆ ಎಲ್ಲರಿಗೂ ಜ್ಞಾನ ಇರುತ್ತದೆ. ಆದ್ರೆ, ಅವರಿಗೆ ಇದೆಲ್ಲ ಎಲ್ಲಿಂದ ಬರುತ್ತೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:- ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್: ಮಾಜಿ ಸಂಸದ ಪ್ರತಾಪ್ ಸಿಂಹ
ಇನ್ನು ರಾಹುಲ್ ಗಾಂಧಿ ನಡತೆ ನೋಡಿದರೆ ನನಗೆ ಗೊತ್ತಾಗುತ್ತಿಲ್ಲ. ಡೋಕ್ಲಾಮ್ ಘಟನೆ ಆದಾಗಲೂ ವಿವರಣೆ ಕೇಳಿದ್ರಿ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿರುವಾಗ ಈ ಥರ ಮಾತನಾಡುವುದು ಎಷ್ಟು ಸರಿ? ಈ ಆಪರೇಷನ್ ಸಿಂಧೂರ್ ವೇಳೆ ನಮ್ಮದು ಎಷ್ಟು ವಿಮಾನ ಹೋಗಿದೆ? ನೀವೇನು ಚೈನೀಸ್ ಏಜೆಂಟಾ? ಪಾಕಿಸ್ತಾನದ ಏಜೆಂಟಾ? ಜ್ಯೋತಿ ಮಲ್ಹೋತ್ರಾ ಥರ ನೀವು ಆಗಿದ್ದೀರಾ ಎಂದು ಕಿಡಿಕಾರಿದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…