ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಕುರಿತು ಪ್ರತಾಪ್ ಸಿಂಹ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ವಾಹನ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಕೋರಿ ಮನವಿ ಮಾಡಲಾಯಿತು ಎಂದು ಹೇಳಿದ್ದಾರೆ.
ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಂಸದರಿಗೆ ಧನ್ಯವಾದಗಳು ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ಮುಂದಿನ 2028ರ ವಿಧಾನಸಭೇ ಚುನಾವಣೆಗೆ ಪ್ರತಾಪ್ ಸಿಂಹ ಅವರು ಮೈಸೂರು ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ. ಈ ಹಿನ್ನೆಲೆಯಲ್ಲಿ ಅವರು ಭಾರೀ ಸುದ್ದಿಯಲ್ಲಿದ್ದು, ಚಾಮರಾಜ ಕ್ಷೇತ್ರದ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಪುನೀತ್ ಮಡಿಕೇರಿ ೨.೧೦ ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ನೂತನ ರಂಗಮಂದಿರ ನಿರ್ಮಾಣಕ್ಕೆ ಸಿದ್ಧತೆ ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿದ್ದ…
ಬೆಂಗಳೂರು: “ಗಾಳಿ, ನೀರಿನಲ್ಲಿ ಬಸ್ ಓಡಿಸೋಕೆ ಆಗಲ್ಲ!” ಎಂದು ಹೇಳುವ ಮೂಲಕ ಬಸ್ ಟಿಕೆಟ್ ದರ ಏರಿಕೆಯನ್ನು ಸಚಿವ ಪ್ರಿಯಾಂಕ್…
ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್‌ನಲ್ಲೇ 99 ಅಡಿಗೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ…
ಬೆಂಗಳೂರು: ರೈತರಿಗೆ ದೀಪಾವಳಿ ಹೊತ್ತಿನಲ್ಲಿ ಪರಿಹಾರದ ಸಿಹಿ ಸುದ್ದಿ. ಈ ಹಿಂದೆ ₹2,500 ಇದ್ದ ಬರ ಪರಿಹಾರವನ್ನು ಒಟ್ಟು ₹5,000ಕ್ಕೆ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ…