ಮೈಸೂರು ನಗರ

ಡಿಸಿಎಂ ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್‌ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.‌ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ? ಎಂದು ಪ್ರಶ್ನೆ ಮಾಡಿದರು.

ಇನ್ನು ರಾಜಕೀಯಕ್ಕೆ ನೀವು ಮೇಕೆದಾಟು ಪಾದಯಾತ್ರೆ ಮಾಡಿದ್ದೀರಿ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್‌ಗಳಾ? ನೀವು ಹೋರಾಟ ಮಾಡೋದಿದ್ರೆ ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ಮಾಡಿ. ಸ್ಟಾಲಿನ್ ಒಪ್ಪಿಗೆ ಪಡೆದು ಬನ್ನಿ, ಆಗ ನಾನು ನಿಮ್ಮ ಹೋರಾಟಕ್ಕೆ ಬರುತ್ತೇನೆ ಎಂದು ಸವಾಲು ಹಾಕಿದರು.

ಇನ್ನು ಡಿಕೆಶಿ ಅವರೇ ಹುಲಿ ಏರಿದ್ದೀರಿ, ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ ಅಧಿಕಾರ ಇರುವಾಗ ಮಾತ್ರ ನಿಮಗೆ ಬೆಲೆ ಇರೋದು. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ ಎಂದು ಸಲಹೆ ನೀಡಿದರು. ಕನ್ನಡ ಸಿನಿಮಾ ನಟರ ಬಗ್ಗೆ ಹಗುರವಾಗಿ ಮಾತಾಡಬೇಡಿ.‌ ರಾಜ್ಯಕ್ಕೆ ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಾಂಗ್‌ ಕೊಟ್ಟರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

8 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

9 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

9 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

10 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

10 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

10 hours ago