ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ? ಎಂದು ಪ್ರಶ್ನೆ ಮಾಡಿದರು.
ಇನ್ನು ರಾಜಕೀಯಕ್ಕೆ ನೀವು ಮೇಕೆದಾಟು ಪಾದಯಾತ್ರೆ ಮಾಡಿದ್ದೀರಿ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್‌ಗಳಾ? ನೀವು ಹೋರಾಟ ಮಾಡೋದಿದ್ರೆ ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ಮಾಡಿ. ಸ್ಟಾಲಿನ್ ಒಪ್ಪಿಗೆ ಪಡೆದು ಬನ್ನಿ, ಆಗ ನಾನು ನಿಮ್ಮ ಹೋರಾಟಕ್ಕೆ ಬರುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಡಿಕೆಶಿ ಅವರೇ ಹುಲಿ ಏರಿದ್ದೀರಿ, ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ ಅಧಿಕಾರ ಇರುವಾಗ ಮಾತ್ರ ನಿಮಗೆ ಬೆಲೆ ಇರೋದು. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ ಎಂದು ಸಲಹೆ ನೀಡಿದರು. ಕನ್ನಡ ಸಿನಿಮಾ ನಟರ ಬಗ್ಗೆ ಹಗುರವಾಗಿ ಮಾತಾಡಬೇಡಿ. ರಾಜ್ಯಕ್ಕೆ ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ಕೊಟ್ಟರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…