ಮೈಸೂರು: ಗೂಡ್ಸ್ ವಾಹನದಲ್ಲಿ ಕದ್ದೊಯ್ಯುತ್ತಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡುವಲ್ಲಿ ಮೈಸೂರಿನ ಅಶೋಕಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಹಸುಗಳ ಕಳ್ಳತನ ಪ್ರಕರಣಗಳು ದಾಖಲಾಗುತ್ತಲೇ ಇವೆ. ಈ ಬೆನ್ನಲ್ಲೇ ಗೂಡ್ಸ್ ವಾಹನದಲ್ಲಿ ಕಿರಾತಕರು ಹಸುಗಳನ್ನು ಕದ್ದೊಯ್ಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ವೇಳೆ ಗೂಡ್ಸ್ ವಾಹನದಲ್ಲಿದ್ದ ನಾಲ್ಕು ಹಸುಗಳನ್ನು ರಕ್ಷಣೆ ಮಾಡಿದ್ದಾರೆ.
ಘಟನೆ ನಡೆಯುತ್ತಿದ್ದ ಗೋಪಾಲಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾಕಿದ ಹಸುಗಳನ್ನು ರಕ್ಷಣೆ ಮಾಡುವುದೇ ಕಷ್ಟವಾಗಿದೆ. ಹೀಗಾಗಿ ಹಸುಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





