ಮೈಸೂರು ನಗರ

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರದ ತ್ರಿನೇತ್ರ ಸರ್ಕಲ್‌ನ ಬಳಿ ಇರುವ ಸ್ಟಾರ್‌ಗೋಲ್ಡ್ ಕಂಪೆನಿ ಹೆಸರಿನ ಚಿನ್ನದಂಗಡಿ ಮಾಲೀಕ ಯೋಗೇಶ್ ಬಂಧಿತನಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಸ್ಟಾರ್‌ಗೋಲ್ಡ್ ಕಂಪೆನಿ ಹೆಸರಿನಲ್ಲಿ ಚಿನ್ನದಂಗಡಿ ತೆರೆದು ಅತೀ ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಮೇಲೆ ಅತೀ ಹೆಚ್ಚು ಸಾಲ ಕೊಡುವುದಾಗಿ ಗ್ರಾಹಕರನ್ನು ನಂಬಿಸಿ ಅವರು ಅಡಮಾನ ಇರಿಸಿದ ಚಿನ್ನವನ್ನು ಅಕ್ರಮ ವಾಗಿ ತನ್ನ ಲಾಭಕ್ಕಾಗಿ ಗ್ರಾಹಕರ ಗಮನಕ್ಕೆ ತರದೇ ಕರಗಿಸಿ ಒಳಗೊಳಗೇ ಮಾರಾಟ ಮಾಡಿ ಸುಮಾರು ೧೫ ಜನರಿಗೆ ಮೋಸ ಮಾಡಿ ಸುಮಾರು ೧.೫ ಕೋಟಿ ರೂ. ಮೌಲ್ಯದ ೮೫೦ ಗ್ರಾಂ ಚಿನ್ನಾಭರಣವನ್ನು ದೋಚಿದ್ದರು.

ಈ ಸಂಬಂಧ ಗ್ರಾಹಕರು ಆತನ ವಿರುದ್ಧ ವಂಚನೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಶುಕ್ರವಾರ ವಿಜಯನಗರದ ಬಳಿ ಕಾರ್ಯಾಚರಣೆ ನಡೆಸಿ ಯೋಗೇಶ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

9 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

18 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

52 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago