ಮೈಸೂರು ನಗರ

ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಮೈಸೂರು : ಫೇಸ್‌ಬುಕ್‌ನಲ್ಲಿ ಪರಿಚಿತವಾದ ಅಪರಿಚಿತ ಮಹಿಳೆಯ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 27,29 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ವಿಜಯನಗರ ನಿವಾಸಿಯೊಬ್ಬರು ಫೇಸ್ ಬುಕ್ ವೀಕ್ಷಿಸುತ್ತಿದ್ದ ವೇಳೆ ಅಲ್ಲಿ ಮಹಿಳೆಯ ಭಾವಚಿತ್ರ ಗಮನಿಸಿ ಆಕೆಯ ಮೊಬೈಲ್ ಸಂಖ್ಯೆ ಪಡೆದು ಪರಿಚಯ ಮಾಡಿಕೊಂಡಿದ್ದಾರೆ. ನಂತರ ಆಕೆ ಷೇರು ಮಾರುಕಟ್ಟೆ ಬಗ್ಗೆ ಹೇಳಿದ್ದಾಳೆ.

ನೀವು ಹಣ ಹೂಡಿಕೆ ಮಾಡಿದಲ್ಲಿ ಹಣವನ್ನು ಹತ್ತುಪಟ್ಟು ಹೆಚ್ಚು ಮಾಡಬಹುದು ಎಂದು ನಂಬಿಸಿದ್ದಾಳೆ. ಆಕೆಯ ಮಾತನ್ನು ನಂಬಿ ಹಂತ ಹಂತವಾಗಿ 27,29,193ರೂ. ಹಣವನ್ನು ಅವರು ಹೇಳಿದ ಖಾತೆಗೆ ಜಮೆ ಮಾಡಿದ್ದಾರೆ. ನಂತರ ಅವರಿಗೆ ಯಾವ ಲಾಭವೂ ಬಂದಿಲ್ಲ. ಕೊಟ್ಟ ಹಣ ಕೂಡ ವಾಪಸ್ ಬಂದಿಲ್ಲ. ಹೀಗಾಗಿ ಅವರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಡಿತರ ಅಕ್ಕಿ-ರಾಗಿ ಅಕ್ರಮ ಸಾಗಣೆ : ವಶ
ಮೈಸೂರು : ಪಡಿತರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆಟೋ ಮೇಲೆ ದಾಳಿ ನಡೆಸಿರುವ ಆಹಾರ ಇಲಾಖೆ ಅಧಿಕಾರಿಗಳು ೧೦ ಚೀಲ ಅಕ್ಕಿ ಹಾಗೂ ಒಂದು ಚೀಲ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಜೆಎಸ್‌ಎಸ್ ಕಾಲೇಜಿನ ಎಲೆತೋಟದ ಬಳಿ ಪಡಿತರವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಹಾರ ನಿರೀಕ್ಷಕ ಲಿಖಿತ್ ಪ್ರಸಾದ್‌ಗೆ ಬಂದಿದೆ. ನ.೩೦ರ ಸಂಜೆ ಕೃಷ್ಣರಾಜ ಠಾಣೆಯ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಲಾಗಿದೆ.

ಈ ವೇಳೆ ಪ್ಯಾಸೆಂಜರ್ ಆಟೋವನ್ನು ತಡೆದು ನಿಲ್ಲಿಸಿದ್ದಾರೆ. ಪೊಲೀಸರನ್ನು ಕಂಡೊಡನೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ಕಿ ಹಾಗೂ ರಾಗಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago