ಮೈಸೂರು: ಆರ್‌ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುವುದು ಎಂದು ಮೈಸೂರಿನ ಆರ್‌ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ.
ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಸಾಂಕೇತಿಕವಾಗಿ ಇಂದೇ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದ್ದು, ನಾಳೆ ಮೈಸೂರಿನ 16 ಕ್ಯಾಂಟೀನ್‌ಗಳಲ್ಲೂ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತದೆ.
ಇದನ್ನೂ ಓದಿ:- ಮೈಸೂರಿನಲ್ಲಿ ಆರ್‌ಸಿಬಿ ಟೀಂಗಾಗಿ ವಿಶೇಷ ಕಾರು ಸಿದ್ಧ
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿರುವ ಆರ್‌ಸಿಬಿ ಅಭಿಮಾನಿಗಳು ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲೂ ಉಚಿತ ಹೋಳಿಗೆ ಊಟ ಹಾಕಿಸಿ ಎಲ್ಲಾ ಕನ್ನಡಿಗರು ಸಿಹಿ ಹೋಳಿಗೆ ರುಚಿ ಸವಿಯಲಿ. ಆರ್‌ಸಿಬಿ ಗೆಲುವಿನ ಸಂಭ್ರಮ ಹಂಚಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸುವ ಸಾಧ್ಯತೆಗಳಿದ್ದು, ನಾಳೆ ಆರ್‌ಸಿಬಿ ಫೈನಲ್‌ನಲ್ಲಿ ಗೆದ್ದರೆ ಹೋಳಿಗೆ ಊಟ ಸವಿಯುವ ಅವಕಾಶ ಸಿಗಲಿದೆ.





