ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಉಚಿತ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ

ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ ಕೂಡ ಅಧಿಕಾರಗಳ ಜೊತೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನ  ಕೈಗೊಳ್ಳಲಾಗಿದೆ.

ಚಾಮುಂಡೇಶ್ವರಿ ದೇವಾಲಯದಲ್ಲಿ ಜುಲೈ ೧೨ , ೧೯,೨೬  ಹಾಗೂ ವರ್ದಂತಿಯ ೨೭ ರಂದು ಮತ್ತು ಆಗಸ್ಟ್‌ ೨ ರ ಕಡೆಯ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ KSRTC ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಆಷಾಢ ಮಾಸದ ಶನಿವಾರ ಮತ್ತು ಭಾನುವಾರ ಗಳಂದು ಸಾರ್ವಜನಿಕ ವಾಹನಗಳ ಪ್ರವೇಶವನ್ನು ಚಾಮುಂಡಿಬೆಟ್ಟದಲ್ಲಿ ನಿರ್ಬಂಧಿಸಲಾಗಿದ್ದು,ಲಲಿತಾ ಮಹಲ್‌ ಪಾರ್ಕಿಂಗ್‌ ನಲ್ಲೆ ಸಾರ್ವಜನಿಕರುತಮ್ಮ ವಾಹನವನ್ನು ಪಾರ್ಕಿಂಗ್‌ ಮಾಡಿ KSRTC ಬಸ್‌ ಮೂಲಕ ಹಣವನ್ನು ಪಾವತಿ ಟಿಕೆಟ್‌ ಪಡೆದು ಬೆಟ್ಟಕ್ಕೆ ಆಗಮಿಸಬೇಕಾಗಿದೆ.

ಇನ್ನು ತಾಯಿ ಚಾಮುಂಡೇಶ್ವರಿ ದೇವಾಲಯದ ಪ್ರವೇಶಕ್ಕೆ ಯಾವುದೇ ರೀತಿಯ ಪಾಸ್‌ ವ್ಯವಸ್ಥೆ ಮಾಡಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿರುವ ೫೦ ಹಾಗೂ ೩೦೦ ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶ ಪಡೆಯುವ ಅವಕಾಶವಿದೆ.

ಲಲಿತಾ ಮಹಲ್‌ ಪಾರ್ಕಿಂಗ್‌ ಸ್ಥಳದಲ್ಲಿ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೆಟ್‌ ಗಳನ್ನ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.  ಅಲ್ಲದೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತು ಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆ ಮಾಡಲಾಗಿದೆ.