Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆ

ಮೈಸೂರು: ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.

ಇಂದು ನಡೆದ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆಯಲ್ಲಿ ಹರೀಶ್‌ ಗೌಡ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಬಿ.ಎನ್.ಸದಾನಂದ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಮೈಸೂರು ಜಿಲ್ಲಾ ಸಹಕಾರ ಯೂನಿಯನ್‌ನ ಆಡಳಿತದ ಚುಕ್ಕಾಣಿ ಜಿ.ಡಿ.ಹರೀಶ್‌ ಗೌಡ ಅವರ ತಂಡಕ್ಕೆ ಸಿಕ್ಕಂತಾಗಿದೆ.

Tags:
error: Content is protected !!