ಮೈಸೂರು: ನಾಡಿನಾಡ್ಯಂತ ಇಂದು ಗಣೇಶನ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿಘ್ನ ನಿವಾರಕ ಗಣಪನಿಗೆ ಪೂಜೆ ಪುನಸ್ಕಾರಗಳು ಸಲ್ಲುತ್ತಿವೆ.
ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆಯಿಂದಲೂ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ಇನ್ನು ಮೈಸೂರಿನ ಅಗ್ರಹಾರದಲ್ಲಿರುವ ಗಣಪತಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಗಣಪನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗಿದ್ದು, ದೇಗುಲಗಳತ್ತ ಭಕ್ತರ ದಂಡೇ ಆಗಮಿಸುತ್ತಿದೆ.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ವಿಘ್ನ ನಿವಾರಕನ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.





