Mysore
33
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸ್ ದಾಖಲು ಮಾಡಲು ಬರುವುದಿಲ್ಲ. ಆಹಾರ ಇಲಾಖೆ ಮಾಹಿತಿ ಕೊಟ್ಟರೆ ಪೊಲೀಸರು ದಾಳಿ ಮಾಡಿ ಕೇಸ್ ಹಾಕುತ್ತಾರೆ. ಆಹಾರ ಇಲಾಖೆಯ ಗಮನಕ್ಕೆ ಈ ವಿಚಾರ ಬಂದ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಆಗ ಮಾತ್ರ ಪೊಲೀಸರು ಕ್ರಮ ವಹಿಸಲು ಸಾಧ್ಯ. ಪೊಲೀಸರೇ ದಾಳಿ ಮಾಡಿ ಸುಮೋಟೊ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!