ಮೈಸೂರು ನಗರ

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ ಎಂದು ಕೆಪಿಸಿಸ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಪಿಜಿ ಗ್ಯಾಸ್ ಅಭಾವಕ್ಕೆ ಸಂಬಂಧಿಸಿದಂತೆ ಆಟೋ ಚಾಲಕರನ್ನು ಮುಂದೆ ಬಿಟ್ಟು ರಾಜ್ಯ ಸರ್ಕಾರದ ಮೇಲೆ ಆಪಾದನೆ ಮಾಡುವಂತಹ ಷಡ್ಯಂತ್ರವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇಂಧನ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರದ ಮೇಲೆ ನಮ್ಮ ಬಿಜೆಪಿ ನಾಯಕರು ಆಪಾದನೆ ಮಾಡುತ್ತಾರೆ. ಕರ್ನಾಟಕದಲ್ಲಿ ಒಟ್ಟು 372 ಎಲ್‌ಪಿಜಿ ಗ್ಯಾಸ್ ಬಂಕ್‌ಗಳಿವೆ. ಆಟೋ ಸಂಘಟನೆಗಳ ಪದಾಧಿಕಾರಿಗಳು ಅಂತ ಹೇಳಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ಆಯಿಲ್ ಕಂಪನಿಗಳು, ಸರಬರಾಜು ಮಾಡುವುದು ಯಾವುದು ಎಂದು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಳೆದ ಒಂದು ತಿಂಗಳ ಹಿಂದೆ ಒಂದು ಕೆ.ಜಿ ಗ್ಯಾಸ್ ಗೆ 60 ರೂ ಇತ್ತು ಈಗ 162 ರೂ ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 5 ಲಕ್ಷ ಜನ ಆಟೋ ಚಾಲಕರು, ಕಿಗ್ ವರ್ಕರ್ಸ್ ಗೆ ಸಮಸ್ಯೆ ಎದುರಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸೋಮಣ್ಣ, ಶೋಭಕ್ಕ, ಕುಮಾರಸ್ವಾಮಿ ಸೇರಿದಂತೆ ಯಾರೂ ತುಟಿ ಬಿಚ್ಚುತ್ತಿಲ್ಲ. ರಾಜ್ಯ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವವರಿಗೆ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಆಟೋ ಚಾಲಕರಿಗೆ ಪರಿಹಾರ ಕೊಡಬೇಕು ಎನ್ನುತ್ತಾರೆ. ಕರ್ನಾಟಕ ಸರ್ಕಾರ ಯಾಕೆ‌ ಕೊಡಬೇಕು.? ಕೇಂದ್ರ ಸರ್ಕಾರದಿಂದ ನೀವು ಕೊಡಿಸಿ ಎಂದು ಇಂಧನ ಸರಬರಾಜು ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುವ ಆರೋಪವನ್ನು ತಳ್ಳಿಹಾಕಿದರು.

ಇನ್ನು ಹೋಟೆಲ್‌ಗಳೀಗೆ ಸಪ್ಲೈ ಆಗುತ್ತಿದ್ದ ಗ್ಯಾಸ್ ಸರಿಯಾಗಿ ಸಪ್ಲೈ ಆಗದೆ ಬೆಂಗಳೂರಿನಲ್ಲಿ ಶೇ.50.ರಷ್ಟು ಹೋಟೆಲ್ ಗಳು ಮುಚ್ಚಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಸುಮಾರು 8 ಸಾವಿರ ಕೊಟ್ಟು ಬ್ಲ್ಯಾಕ್ ನಲ್ಲಿ ಖರೀದಿ ಮಾಡುತ್ತಿದ್ದಾರೆ. ಮೇ 4 ರ ಬಳಿಕ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 150 ಆಗುತ್ತೆ. ಗೃಹ ಬಳಕೆ ಸಿಲಿಂಡರ್ 2 ಸಾವಿರ ಆಗುತ್ತೆ, ವಾಣಿಜ್ಯ ಸಿಲಿಂಡರ್ 4 ಸಾವಿರ ಆಗುತ್ತೆ ಕಾದು ನೋಡಿ. ಈಗಲೇ ಏರಿಕೆ ಮಾಡಬೇಕಿತ್ತು. ಈಗ ಚುನಾವಣೆ ಇದೆ ಅಂತ ಬೆಲೆ ಏರಿಕೆ ಮಾಡುತ್ತಿಲ್ಲ. ಚುನಾವಣೆ ಮುಗಿದ ಮಾರನೇ ದಿನವೇ ಏರಿಕೆ ಮಾಡ್ತಾರೆ ಕಾದು ನೋಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

9 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

21 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

48 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

1 hour ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago