ಮೈಸೂರು: ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ.
ಗೌರಿ ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ ಹಬ್ಬಕ್ಕೂ ಸಹ ಎಲ್ಲಾ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಈಗಾಗಲೇ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸಿದ್ಧತೆ ಸಾಗಿದೆ.
ಯುವಕರು ತಮ್ಮ ತಮ್ಮ ಏರಿಯಾಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲು ಪೆಂಡಾಲ್ ನಿರ್ಮಾಣದಲ್ಲಿ ತೊಡಗಿದ್ದಾರೆ. ಈಗಾಗಲೇ ದೊಡ್ಡ ದೊಡ್ಡ ಗಣಪತಿ ಮೂರ್ತಿಯನ್ನು ಖರೀದಿ ಮಾಡಿದ್ದು, ನಾಳಿನ ಗಣಪತಿ ಹಬ್ಬಕ್ಕೆ ತಯಾರಿ ನಡೆಸಲಾಗಿದೆ.
ಇನ್ನು ಮನೆಗಳಲ್ಲಿಯೂ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಚಿಕ್ಕ ಗಾತ್ರದ ಗಣಪತಿ ಮೂರ್ತಿಗಳು ಬಂದಿವೆ. ಹಬ್ಬದ ಹಿನ್ನೆಲೆಯಲ್ಲಿ ಇಂದೂ ಕೂಡ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಹೂ, ಹಣ್ಣು, ಬಾಳೆದಿಂಡು ಇನ್ನಿತರ ಪೂಜಾ ಸಾಮಾಗ್ರಿಗಳ ಖರೀದಿ ಭರಾಟೆ ಬಲು ಜೋರಾಗಿದೆ ನಡೆಯುತ್ತಿದೆ.





