ಮೈಸೂರು ನಗರ

ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ: ದೇಗುಲಗಳಲ್ಲಿ ವಿಶೇಷ ಪೂಜೆ

ಮೈಸೂರು: ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ.

ಗೌರಿ ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ ಹಬ್ಬಕ್ಕೂ ಸಹ ಎಲ್ಲಾ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಈಗಾಗಲೇ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸಿದ್ಧತೆ ಸಾಗಿದೆ.

ಯುವಕರು ತಮ್ಮ ತಮ್ಮ ಏರಿಯಾಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲು ಪೆಂಡಾಲ್‌ ನಿರ್ಮಾಣದಲ್ಲಿ ತೊಡಗಿದ್ದಾರೆ. ಈಗಾಗಲೇ ದೊಡ್ಡ ದೊಡ್ಡ ಗಣಪತಿ ಮೂರ್ತಿಯನ್ನು ಖರೀದಿ ಮಾಡಿದ್ದು, ನಾಳಿನ ಗಣಪತಿ ಹಬ್ಬಕ್ಕೆ ತಯಾರಿ ನಡೆಸಲಾಗಿದೆ.

ಇನ್ನು ಮನೆಗಳಲ್ಲಿಯೂ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಚಿಕ್ಕ ಗಾತ್ರದ ಗಣಪತಿ ಮೂರ್ತಿಗಳು ಬಂದಿವೆ. ಹಬ್ಬದ ಹಿನ್ನೆಲೆಯಲ್ಲಿ ಇಂದೂ ಕೂಡ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಹೂ, ಹಣ್ಣು, ಬಾಳೆದಿಂಡು ಇನ್ನಿತರ ಪೂಜಾ ಸಾಮಾಗ್ರಿಗಳ ಖರೀದಿ ಭರಾಟೆ ಬಲು ಜೋರಾಗಿದೆ ನಡೆಯುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago