ಮೈಸೂರು ನಗರ

ಮೈಸೂರು ದಸರಾಗೆ ಗೊಂಬೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆ

ಮೈಸೂರು: ಮೈಸೂರು ದಸರಾಗೆ ಗೊಂಬೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಮೈಸೂರು ನಗರದ ವಸ್ತು ಪ್ರದರ್ಶನ ಮುಂಭಾಗ ಸುಮಾರು 10-23 ವರ್ಷದ ಬಾಲಕಿ ಶವ ಪತ್ತೆಯಾಗಿದೆ. ಈ ಬಾಲಕಿ ಮೈಸೂರು ದಸರಾಗೆ ಗೊಂಬೆ ಬಲೂನ್‌ ಮಾರಲು ಬಂದಿದ್ದಳು.

ಮೈಸೂರಿನ ನಜರಬಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಮಾಹಿತಿ ಪ್ರಕಾರ ಬಾಲಕಿ ನಿನ್ನೆಯಿಂದಲೂ ನಾಪತ್ತೆಯಾಗಿದ್ದಳು ಎಂಬ ಮಾಹಿತಿ ಲಭ್ಯವಾಗಿದ್ದು, ಇಂದು ಬೆಳಿಗ್ಗೆ ಮಳೆ ಬಂದ ಪರಿಣಾಮ ಬೇರೆಡೆ ತೆರಳಲು ಕುಟುಂಬಸ್ಥರು ತಯಾರಿ ನಡೆಸುತ್ತಿದ್ದರು. ಈ ವೇಳೆ ಬಾಲಕಿ ಇಲ್ಲದ್ದನ್ನು ಕಂಡು ಗಾಬರಿಗೊಂಡಿದ್ದರು. ಹೀಗಿರುವಾಗಲೇ ಪಕ್ಕದಲ್ಲೇ ಇರುವ ಚರಂಡಿ ಬಳಿ ಬಾಲಕಿಯ ಶವ ಪತ್ತೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago