Mysore
18
few clouds

Social Media

ಸೋಮವಾರ, 26 ಜನವರಿ 2026
Light
Dark

ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹ

ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ಈ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇನ್ನೂ ಕೂಡ ಅದು ಈಡೇರಿಲ್ಲ. ಆದ್ದರಿಂದ ದಲಿತರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ:-ಡಿಕೆಶಿ ಸಿಎಂ ಆಗಬಾರದು ಎಂಬುದೇ ಸಿದ್ದರಾಮಯ್ಯರ ಮುಖ್ಯ ಉದ್ದೇಶ: ಜಗದೀಶ್‌ ಶೆಟ್ಟರ್‌

ಇದೇ ವೇಳೆ ಮಾತನಾಡಿದ ಮಾಜಿ ಮೇಯರ್‌ ಪುರುಷೋತ್ತಮ್‌ ಅವರು, ಆರ್‌ಎಸ್‌ಎಸ್‌ ನೋಂದಣಿ ಆಗಿರದಿದ್ದರೂ ಅದಕ್ಕೆ 100 ವರ್ಷ ತುಂಬಿದ ಸಂದರ್ಭದಲ್ಲಿ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಕೇಳುತ್ತಿದ್ದಾರೆ. ತಮ್ಮ ಸಂಸ್ಥೆ ನೋಂದಣಿಯಾಗಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡಬೇಕೆಂದರೂ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮರ್ಥ, ಹಿರಿಯ, ಪರಿಸ್ಥಿತಿ ನಿಭಾಯಿಸುವ ದಲಿತ ನಾಯಕರೊಬ್ಬರಿಗೆ ರಾಜ್ಯದಲ್ಲಿ ಸಿಎಂ ಸ್ಥಾನ ನೀಡಬೇಕೆಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಹೇಳಿದರು.

Tags:
error: Content is protected !!