ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ಈ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇನ್ನೂ ಕೂಡ ಅದು ಈಡೇರಿಲ್ಲ. ಆದ್ದರಿಂದ ದಲಿತರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದರು.
ಇದನ್ನೂ ಓದಿ:-ಡಿಕೆಶಿ ಸಿಎಂ ಆಗಬಾರದು ಎಂಬುದೇ ಸಿದ್ದರಾಮಯ್ಯರ ಮುಖ್ಯ ಉದ್ದೇಶ: ಜಗದೀಶ್ ಶೆಟ್ಟರ್
ಇದೇ ವೇಳೆ ಮಾತನಾಡಿದ ಮಾಜಿ ಮೇಯರ್ ಪುರುಷೋತ್ತಮ್ ಅವರು, ಆರ್‌ಎಸ್‌ಎಸ್ ನೋಂದಣಿ ಆಗಿರದಿದ್ದರೂ ಅದಕ್ಕೆ 100 ವರ್ಷ ತುಂಬಿದ ಸಂದರ್ಭದಲ್ಲಿ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಕೇಳುತ್ತಿದ್ದಾರೆ. ತಮ್ಮ ಸಂಸ್ಥೆ ನೋಂದಣಿಯಾಗಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡಬೇಕೆಂದರೂ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಮರ್ಥ, ಹಿರಿಯ, ಪರಿಸ್ಥಿತಿ ನಿಭಾಯಿಸುವ ದಲಿತ ನಾಯಕರೊಬ್ಬರಿಗೆ ರಾಜ್ಯದಲ್ಲಿ ಸಿಎಂ ಸ್ಥಾನ ನೀಡಬೇಕೆಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಹೇಳಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…