ಮೈಸೂರು ನಗರ

ನವರಾತ್ರಿಗೆ ಮೆರುಗು: ಅರಮನೆಗೆ 20 ಸಾವಿರ ಬಲ್ಬ್‌ ಅಳವಡಿಕೆ

ಮೈಸೂರು: ಈ ಬಾರಿಯ ಅದ್ದೂರಿ ದಸರಾ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಅದರಂತೆ ಅರಮನೆಯು ಜಗಮಗಿಸಲು 20 ಸಾವಿರ ನೂತನ ಬಲ್ಬ್‌ಗಳ ಅಳವಡಿಕೆಯ ಕಾರ್ಯವು ಭರದಿಂದ ಸಾಗಿದೆ.

ಗಾಳಿ ಮಳೆಯಿಂದ ಹಾಳಾಗಿದ್ದ ವಿದ್ಯುತ್‌ ಬಲ್ಬ್‌ ಗಳನ್ನು ತೆಗೆದು ನೂತನ ಬಲ್ಬ್‌ಗಳನ್ನು ಅಳವಡಿಸುವ ಕಾರ್ಯವನ್ನು ಅರಮನೆ ಮಂಡಳಿಯ ವಿದ್ಯುತ್‌ ವಿಭಾಗದ 12 ಸಿಬ್ಬಂದಿಗಳು ಮಾಡಿದ್ದಾರೆ.

ಸೋಮವಾರದಿಂದ ಅರಮನೆಯ ಎಲ್ಲಾ ದ್ವಾರಗಳು ಮತ್ತು ಒಳಾಂಗಣಕ್ಕೆ ಬಣ್ಣ ಲೇಪನದ ಕಾಮಗಾರಿ ನಡೆಯುತ್ತಿದೆ. ಇದರ ಜೊತೆಗೆ ವರಾಹ, ಬಲರಾಮ ಹಾಗೂ ಜಯಮಾರ್ತಾಂಡ ದ್ವಾರಗಳು ಸೇರಿದಂತೆ ಆವರಣದಲ್ಲಿರುವ ಎಲ್ಲಾ ದೇಗುಲಗಳು ಮತ್ತು ಕೋಟೆಗಳನ್ನು ಒಳಗೊಂಡಂತೆ ಇನ್ನಿತರ ಎಲ್ಲಾ ಭಾಗಗಳಿಗೂ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ.

ಅರಮನೆಯ ಒಳಾಂಗಣದಲ್ಲಿ ಮಸಿಯಾಗಿದ್ದ ಅಲಂಕೃತ ದೀಪಗಳ ಗಾಜುಗಳನ್ನು ಕೆಳಗೆ ಇಳಿಸಿ ಅವುಗಳಲ್ಲಿರುವ ಕೊಳೆಯನ್ನು ತೆಗೆದು ಹೊಳೆಯುವಂತೆ ಮಾಡಲಾಗಿದೆ. ಅಲ್ಲದೇ ಅರಮನೆ ತೂಗುವ ದೀಪಗಳಲ್ಲಿ ಒಡೆದ ಗಾಜುಗಳನ್ನು ಬದಲಿಸಿ, ಎತ್ತರದ ಕಂಬಗಳಿಗೆ ಕ್ರೇನ್‌ನ ಮೂಲಕ ದುರಸ್ತಿ ವ್ಯವಸ್ಥೆಯನ್ನು ಕೈಗೆತ್ತಿಕೊಂಡು ಸರಿಪಡಿಸಲಾಗುತ್ತಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

9 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

13 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

13 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

13 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

13 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

13 hours ago