ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್ ಅಭಿಯಾನ ಆರಂಭಿಸುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕಿಡಿಕಾರಿರುವ ಅವರು, ದುರುದ್ದೇಶದಿಂದಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಇದು ರಾಜಕೀಯ ಷಡ್ಯಂತ್ರ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಅಲ್ಲದೇ ನಾನು ಸಿಎಂ ಸಿದ್ದರಾಮಯ್ಯ ಪರ ಎಂದು ಪೋಸ್ಟ್ ಮಾಡಿರುವ ಅವರು, ಗೋ ಬ್ಯಾಕ್ ಗವರ್ನರ್ ಅಭಿಯಾನ ಆರಂಭಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.





