ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. ಇಂತಹ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಕೇರಳ, ತಮಿಳುನಾಡು, ಗುಜರಾತ್ ಭಾಗದಲ್ಲಿ ಸಾಮಾನ್ಯ ಹಾಲಿಗೆ 54 ರೂ ಇದೆ. ನಮ್ಮಲ್ಲಿ ಬೆಲೆ ಏರಿಕೆ ಮಾಡಿದರೂ ಸಾಮಾನ್ಯ ಹಾಲಿಗೆ 46 ರೂ. ಇದೆ ಎಂದು ತಿಳಿಸಿದರು.
ನಮ್ಮ ನಂದಿನಿ ಹಾಲು ಪರಿಶುದ್ಧ ಹಾಲು. ಈಗ ಹೆಚ್ಚಳ ಮಾಡಿರುವ ಹಣ ರೈತರಿಗೆ ನೇರವಾಗಿ ತಲುಪಿಸಲಾಗುತ್ತದೆ. ನಮ್ಮ ಸಂಸ್ಥೆ ಆರ್ಥಿಕ ಸಂಕಷ್ಟದಲ್ಲೇನು ಇಲ್ಲ. ಈ ವರ್ಷ ವಾರ್ಷಿಕ 6 ರಿಂದ 7 ಕೋಟಿ ಲಾಭದಲ್ಲಿ ಇದೆ ಎಂದು ಹೇಳಿದರು.
ಸಾಮಾನ್ಯ ದಿನಗಳಿಗಿಂತ ಬೇಸಿಗೆ ಸಂದರ್ಭದಲ್ಲಿ ನಂದಿನಿ ಮಜ್ಜಿಗೆ, ಮೊಸರು, ಲಸ್ಸಿ ಹೆಚ್ಚು ಮಾರಾಟವಾಗುತ್ತದೆ. ಬೇಡಿಕೆ ಎಷ್ಟೇ ಬಂದರೂ ಪೂರೈಸುವ ನಿಟ್ಟಿನಲ್ಲಿ ನಮ್ಮ ಪ್ರೊಡಕ್ಸನ್ ತಂಡ ಸಿದ್ದವಿದೆ ಎಂದು ತಿಳಿಸಿದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…