Good news for Mysoreans: MP Yaduveer Wadiyar writes letter to IndiGo Airlines
ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂಡಿಗೋ ಏರ್‌ಲೈನ್ಸ್ ಸಂಸ್ಥೆಗೆ ಪತ್ರ ಬರೆದಿದ್ದಾರೆ.
ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ.
ಈ ಪ್ರಮುಖ ನಗರಗಳಿಗೆ ವಿಮಾನಯಾನ ಸೇವೆ ಆರಂಭಿಸಿದರೆ ಉದ್ಯಮಿಗಳಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ವಿವರಣೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಅತೀ ಶೀಘ್ರದಲ್ಲೇ ಈ ವಿಷಯದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸ ನನಗಿದೆ. ಇಂಡಿಗೋ ಏರ್‌ಲೈನ್ಸ್ ಈ ಸೇವೆಯನ್ನು ಆರಂಭಿಸುವ ಕುರಿತು ಸೂಕ್ತ ಭರವಸೆ ನೀಡಿದೆ. ಈ ವಿಮಾನ ಸೇವೆಗಳು ಆರಂಭವಾದರೆ ನಮ್ಮ ಮೈಸೂರು ಜನರಿಗೆ ಅತ್ಯಂತ ಹೆಚ್ಚು ಪ್ರಯೋಜನವಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…