ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ ಸಿಕ್ಕಿದೆ.
ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು, ಕಲ್ಯಾಣ ಕರ್ನಾಟಕದಿಂದ ಮಂತ್ರಾಲಯ ರೋಡ್‌ಗೆ ನೇರ ಸಂಪರ್ಕ ಕಲ್ಪಿಸುವ ರೈಲು ಇದಾಗಿದ್ದು, ಮಂತ್ರಾಲಯಕ್ಕೆ ಹೋಗುವವರೆಗೆ 33 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುವ ಭಕ್ತರ ಪಾಲಿಗೆ ಈ ರೈಲು ಸಾಕ್ಷಾತ್ ವರದಾನವೇ ಸರಿ ಎನ್ನುವಂತಾಗಿದೆ. ಮೈಸೂರಿನಿಂದ ಸಂಜೆ 5:05ಕ್ಕೆ (ಬೆಂಗಳೂರು ಸಿಟಿಯಿಂದ ರಾತ್ರಿ 8:25ಕ್ಕೆ) ಹೊರಡುವ ರೈಲು, ಮರುದಿನ ಮುಂಜಾನೆ ಸರಿಯಾಗಿ 3:28ಕ್ಕೆ ಮಂತ್ರಾಲಯ ರಸ್ತೆ ನಿಲ್ದಾಣವನ್ನು ತಲುಪಲಿದೆ.
ಅಂದು ಮುಂಜಾನೆಯೇ ತುಂಗಭದ್ರೆಯಲ್ಲಿ ಪುಣ್ಯಸ್ನಾನ ಮಾಡಿ ಭಕ್ತರು ಮುಂಜಾನೆಯ ಶಾಂತ ವಾತಾವರಣದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ಅನುಕೂಲವಾಗಲಿದೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…