ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.
ಹಬ್ಬದ ಅಂಗವಾಗಿ ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಗೋಪೂಜೆಯನ್ನು ವೈದಿಕ ವಿಧಾನದಲ್ಲಿ ನೆರವೇರಿಸಲಾಯಿತು. ವೇದ ಮಂತ್ರೋಚ್ಚಾರಣೆಯ ನಡುವೆ ಭಕ್ತರು ಭಕ್ತಿಭಾವದಿಂದ ಪೂಜೆಯಲ್ಲಿ ಪಾಲ್ಗೊಂಡರು.
ಪೂಜೆಯ ನಂತರ ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೀಪಾವಳಿಯ ಹಿನ್ನೆಲೆಯಲ್ಲಿ ದೇವಾಲಯದ ಆವರಣವನ್ನು ಹೂವಿನ ಅಲಂಕಾರ, ಬಣ್ಣದ ದೀಪಗಳಿಂದ ಸಿಂಗರಿಸಲಾಗಿತ್ತು.
ಸ್ಥಳೀಯರು ಹಾಗೂ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ, ಪಂಚಮುಖಿ ಆಂಜನೇಯಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.





