ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರೊಂದಿಗೆ ಸಚಿವರು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದರು.
ಬಳಿಕ ಮಾತನಾಡಿದ ಅವರು, ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಮಾಡುವುದು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ಗಳನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು
ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





