ಮೈಸೂರು ನಗರ

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸುವಂತೆ ಆದೇಶ ಹೊರಡಿಸಿರುವುದನ್ನು ಮೈಸೂರು ವಿ.ವಿ ಸಂಶೋಧಕರ ಸಂಘ ಸ್ವಾಗತಿಸಿದೆ.

ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರಿಗೆ ಈ ಹಿಂದೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಅವರು, ಈ ಸಂಬಂಧ ಸರ್ಕಾರದೊಂದಿಗೆ ಮಾತನಾಡಿ ಕೈಗೊಂಡ ಕ್ರಮಗಳ ಕುರಿತು ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್ ಅವರ ವಿಳಾಸಕ್ಕೆ ಪ್ರತಿಕ್ರಿಯೆ ಪತ್ರ ಕಳುಹಿಸಿದ್ದಾರೆ.

ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲು ಅವಕಾಶ ಕಲ್ಪಿಸಿರುವ ಹಿಂದೆ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ಒತ್ತಾಸೆ ಹಾಗೂ ನಿರಂತರ ಪ್ರಯತ್ನ ಮಹತ್ವದ ಪಾತ್ರ ವಹಿಸಿದೆ ಎಂದು ಸಂಘದ ಅಧ್ಯಕ್ಷ ವರಹಳ್ಳಿ ಆನಂದ ತಿಳಿಸಿದ್ದಾರೆ.

ಕಳೆದ ನಾಲ್ಕು ಶಿಕ್ಷಕರ ನೇಮಕಾತಿಗಳಲ್ಲಿಯೂ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ಕರೆಯದೆ ಕಡೆಗಣಿಸಲಾಗಿತ್ತು. ಇದೀಗ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆಗೆ ಒಳಪಡಿಸಿರುವುದು ಕನ್ನಡ ಭಾಷೆ ಹಾಗೂ ಕನ್ನಡನಾಡಿಗೆ ದೊರೆತ ಗೌರವವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.

ಕನ್ನಡ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು ೧೫ ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ನೇಮಕಾತಿ ಪರೀಕ್ಷೆಗಳು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು. ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂಬುದು ಸಂಘದ ಆಗ್ರಹವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago