ಮೈಸೂರು : ಗ್ರೇಡ್ – 1 ಮೈಸೂರು ಯೋಜನೆಯ ಅನುಷ್ಠಾನಕ್ಕೆ ರಾಜ್ಯಸಚಿವ ಸಂಪುಟ ಅನುಮೋದನೆ ನೀಡುವ ಮೂಲಕ ನನ್ನ ಬಹಳ ವರ್ಷಗಳ ಕನಸು ಈಡೇರಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಮೈಸೂರು ಮಾಡಬೇಕೆಂಬುದು ನನ್ನ ಕನಸಾಗಿತ್ತು. ಇದಕ್ಕಾಗಿ ಹಲವು ವರ್ಷಗಳಿಂದ ಪ್ರಯತ್ನಿಸುತ್ತಾ ಬಂದಿದ್ದೆ. ಕಡೆಗೂ ಇದೀಗ ರಾಜ್ಯಸಚಿವ ಸಂಪುಟ ಗ್ರೇಟರ್ ಮೈಸೂರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. ಈ ಮೂಲಕ ನನ್ನ ಕನಸು ಈಡೇರಿದ್ದು, ಚಾಮುಂಡೇಶ್ವರಿ ಕ್ಷೇತ್ರದ ಶೇ.೯೦ ಭಾಗ ಗ್ರೇಟರ್ ಮೈಸೂರು ಯೋಜನೆಯ ವ್ಯಾಪ್ತಿಗೆ ಸೇರಲಿದೆ. ಇದರಿಂದ ಚಾಮುಂಡೇಶ್ವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಆಗಲಿದ್ದು, ಕ್ಷೇತ್ರದ ಜನರಿಗೆ ಕುಡಿಯುವ ನೀರು, ಉತ್ತಮ ಗುಣಮಟ್ಟದ ರಸ್ತೆಗಳು ಸೇರಿದಂತೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಲಭ್ಯವಾಗಲಿವೆ ಎಂದರು.
ಇದನ್ನು ಓದಿ: ಲೆಜೆಂಡ್ಸ್ ಪ್ರೋ T20 ಲೀಗ್ : ದಿನೇಶ್ ಕಾರ್ತಿಕ್, ಶಾನ್ ಮಾರ್ಶ್ ಸೇರಿದಂತೆ ಐವರು ದಿಗ್ಗಜರು ಲೀಗ್‌ಗೆ ಸೇರ್ಪಡೆ!
ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒಕ್ಕಲಿಗ ಸಮಾಜದ ಸ್ವಾಮೀಜಿಗಳು ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಒಕ್ಕಲಿಗ ಸಮಾಜದ ಪರವಾಗಿ ಸ್ವಾಮೀಜಿಗಳು ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ, ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆಯೂ ನಾನು ಮಾತನಾಡಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿ ಮಾತ್ರವೇ ನನ್ನ ಗುರಿಯಾಗಿದೆ ಎಂದು ಹೇಳಿದರು.



